ಮೈಸೂರು,ಆ,4,2020(www.justkannada.in): ಇಂದು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದು ಈ ಹಿನ್ನೆಲೆ ಇಂದು ಮೈಸೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.
ಈಗಾಗಲೇ ಇಂದು ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದ್ದು, ತಡರಾತ್ರಿಯಿಂದ 24 ಗಂಟೆ ಕಾಲ ಮೈಸೂರು ನಗರದಲ್ಲಿ ನಿಷೇಧಾಜ್ನೆ ಜಾರಿ ಮಾಡಲಾಗಿದೆ. ಈ ನಡುವೆ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 4ರ ರಾತ್ರಿ 10 ರಿಂದ ಆಗಸ್ಟ್ 6ರ ಬೆಳಗ್ಗೆ 6 ರವರೆಗೆ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಹಾಗೆಯೇ ಆದೇಶ ಉಲ್ಲಂಘನೆ ಮಾಡಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿ ಅಭಿರಾಂ ಜೀ ಶಂಕರ್ ಎಚ್ಚರಿಕೆ ನೀಡಿದ್ದಾರೆ.
Key words: ayodyha- ram mandir- Mysore –district- liquor – restriction