ಬೆಂಗಳೂರು,ಆಗಸ್ಟ್,18,2023(www.justkannada.in): ಎನ್ ಇಪಿ ರದ್ದು ಮಾಡಲು ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಚಿವ ಬಿ.ಸಿ ನಾಗೇಶ್, ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು ಶಾಲೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಸಬೇಕು ಅಂತಾ ಷಡ್ಯಂತ್ರ ನಡೆಯುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಸ್.ಎಸ್.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಎನ್ ಇಪಿ ತೆಗೆದುಹಾಕುವ ಮೊದಲು ಜನರ ಮುಂದಿಡಲಿ ಅದರಲ್ಲಿ ಏನೆಲ್ಲ ಲೋಪದೋಷಗಳಿವೆ ಎಂದು ಬಹಿರಂಗಪಡಿಸಬೇಕು. ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಈ ರೀತಿ ನಡೆದುಕೊಳ್ಳಬಾರದು ಎಂದು ಬಿಸಿ ನಾಗೇಶ್ ವಾಗ್ದಾಳಿ ನಡೆಸಿದರು.
Key words: B.S. Nagesh – against -Govt – closing- Govt schools.