ಮಂಡ್ಯ,ಮಾರ್ಚ್,4,2025 (www.justkannada.in): ಸಿಎಂ ಸಿದ್ದರಾಮಯ್ಯ ಈ ಬಾರಿ ರೈತಪರ ಬಜೆಟ್ ಮಂಡನೆ ಮಾಡಲಿ. ರಾಜ್ಯ ಬಜೆಟ್ ರೈತಪರ ಬಜೆಟ್ ಆಗಿರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಜಮೀನಿನಲ್ಲಿ ಇಂದು ಭತ್ತ ನಾಟಿ ಮಾಡಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೈತಪರ ನಿರ್ಧಾರ ಮಾಡಿಲ್ಲ ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸದ್ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ತಿಳಿಸಿದರು.
ಒಂದು ಕಡೆ ಗ್ಯಾರಂಟಿ ಮೂಲಕ ಕೊಡುವುದಾಗಿ ಹೇಳುತ್ತಾರೆ. ಮತ್ತೊಂದು ಕಡೆ ಕಿತ್ತುಕೊಳ್ಳುವ ಕೆಲಸ ನಡೆಸುತ್ತಿದ್ದಾರೆ. ಇದು ಬಡವರ ವಿರೋಧಿ ಕಾಂಗ್ರೆಸ್ ಸರಕಾರ. ಇದು ಅಭಿವೃದ್ಧಿ ಶೂನ್ಯ ಸರಕಾರ ಎಂದು ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಈ ಅಧಿವೇಶನದಲ್ಲಿ ಬಿಜೆಪಿ, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದೆ. ಕಾಂಗ್ರೆಸ್ ಸರಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡಲಿದ್ದೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
Key words: budget, pro-farmer, budget, B.Y. Vijayendra