ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಳ : ಬಿ.ವೈ. ವಿಜಯೇಂದ್ರ

ಕಲಬುರಗಿ,ಏಪ್ರಿಲ್,18,2025 (www.justkannada.in): ಸಿದ್ದರಾಮಯ್ಯ  ಮುಖ್ಯಮಂತ್ರಿ ಆದ ಬಳಿಕ  ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ.ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಲವ್ ಜಿಹಾದ್ ಹೆಚ್ಚಳವಾಗಿದೆ ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಕ್ಷ, ಹಿಂದೂ ಕಾರ್ಯಕರ್ತರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಕಾರ್ಯಕರ್ತರಿಗೆ ಅಪಮಾನ ಆಗದ ರೀತಿಯಲ್ಲಿ ಕೆಲಸ ಮಾಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಕಾರ್ಯಕರ್ತರ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದರು

ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಪ್ರತ್ಯೇಕ ಧರ್ಮದ ಮೂಲಕ “ಬೆಂಕಿ ಹಚ್ಚುವ ಕೆಲಸ ಮಾಡಿದ್ದರು.  ಅಣ್ಣ ಬಸವಣ್ಣನವರು ಸಮ ಸಮಾಜದ ಕನಸು ಕಂಡವರು. ಅದಕ್ಕಾಗಿ ಕೈಂಕರ್ಯ ತೊಟ್ಟು ನುಡಿದಂತೆ ನಡೆದವರು. ತಾವುಗಳು ವೀರಶೈವ – ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಹರಿಹಾಯ್ದರು.

Key words: Love Jihad,  increased, CM, Siddaramaiah, B.Y. Vijayendra