ನವದೆಹಲಿ, ನವೆಂಬರ್ 09, 2019 (www.justkannada.in): ಐತಿಹಾಸಿಕ ಅಯೋಧ್ಯಾ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು ಪ್ರಕಟಕ್ಕೆ ಕ್ಷಣಗಣನೆ ಆರಂಭವಾಗಲಿದೆ.
ಸುಪ್ರಿಂಕೋರ್ಟ್ ಇಂದು ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ. ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.
. ಇಂದು ಬೆಳಗ್ಗೆ 9.30ಕ್ಕೆ ಸಿಜೆಐ ರಂಜನ್ ಗೊಗೊಯಿ ಅವರು ಸುಪ್ರೀಂಕೋರ್ಟ್ಗೆ ಆಗಮಿಸಲಿದ್ದು ಈಗಾಗಲೇ ಅವರ ನಿವಾಸಕ್ಕೂ ಭದ್ರತೆ ಒದಗಿಸಲಾಗಿದೆ.
ರಾಜ್ಯದಲ್ಲೂ ಸಹ ಖಾಕಿ ಪಡೆ ಅಲರ್ಟ್ ಆಗಿದ್ದು ಕೊಡ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಭದ್ರತೆ ಒದಗಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಹ ಪ್ರಚೋದನಾತ್ಮಕ ಪೋಸ್ಟ್ಗಳನ್ನು ಹಾಕಬಾರದು ಎಂದು ಆಯಾ ಜಿಲ್ಲಾಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.