ರೈತರಿಗೆ ಕಬ್ಬಿನ ಬಾಕಿ ಪಾವತಿಸದ ಹಿನ್ನೆಲೆ: 9 ಸಕ್ಕರೆ ಕಾರ್ಖಾನೆ ಮುಟ್ಟುಗೋಲಿಗೆ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ,ಜೂ,18,2019(www.justkannada.in):  ರೈತರಿಗೆ  ಕಬ್ಬಿನ ಬಾಕಿ ಹಣ ಪಾವತಿಸದ ಹಿನ್ನೆಲೆ ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳನ್ನ ಮುಟ್ಟುಗೋಲು ಹಾಕಿಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಮುಖಂಡ ಉಮೇಶ್ ಕತ್ತಿಗೆ ಸೇರಿದ ವಿಶ್ವರಾಜ ಶುಗರ್ಸ್, ಖಾನಾಪುರದ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ, ಅಥಣಿ ಶುಗರ್ಸ್, ಮನವಳ್ಳಿಯ ರೇಣುಕಾ ಶುಗರ್ಸ್, ಕೊಳವಿ ಗೋಕಾಕ್ ಶುಗರ್ಸ್, ಬೈಲಹೊಂಗಲದ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ,  ಮಲಪ್ರಭ ಸಹಕಾರಿ ಸಕ್ಕರೆ ಕಾರ್ಖಾನೆ,  ಉಗಾರ ಶುಗರ್ಸ್ ಸೇರಿ 9 ಸಕ್ಕರೆ ಕಾರ್ಖಾನೆಗಳನ್ನ ಮುಟ್ಟುಗೋಲು ಹಾಕಿಕೊಳ್ಳುವಂತೆ ತಹಶೀಲ್ದಾರ್ ಗೆ ಬೆಳಗಾವಿ ಡಿಸಿ ಎಸ್.ಬಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಪಾವತಿಸದ  ಹಿನ್ನೆಲೆ ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಸಭೆ ನಡೆಸಿದ್ದ ಸಿಎಂ ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮುಟ್ಟುಗೋಲಿಗೆ ಆದೇಶ ಹೊರಡಿಸಲಾಗಿದೆ.

 

Key words: Background not paying cane dues to  farmers :9 Sugar factory ordered forfeit.

#canedues #farmers  #Sugarfactory  #forfeit #belagavi