ನವದೆಹಲಿ,ಅ,23,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಂದು ಜಾಮೀನು ಮಂಜೂರು ಮಾಡಿರುವ ನವದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಜಾಮೀನು ನೀಡಿರುವುದನ್ನ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇಂದು ಜಾಮೀನು ದೊರೆತರೂ ಡಿ.ಕೆ ಶಿವಕುಮಾರ್ ಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ಇಡಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಇಡಿ ಅಧಿಕಾರಿಗಳು ನಾಳೆ ಸಿಜೆ ಪೀಠದಲ್ಲಿ ಮೇಲ್ಮನವಿ ಅರ್ಜಿ ಬಗ್ಗೆ ಪ್ರಸ್ತಾಪಿಸಲಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ49 ದಿನಗಳಿಂದ ಜೈಲುವಾಸ ಅನುಭವಿಸುತ್ತಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಂದು ನವದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.
Key words: bail – former minister- DK Sivakumar-ED- Supreme Court – Appeal