ಬೆಂಗಳೂರು,ಜೂನ್,1,2024 (www.justkannada.in): ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ಧದ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ದ 40% ಕಮಿಷನ್ ಮತ್ತು ಭ್ರಷ್ಟಾಚಾರದ ಆರೋಪ ಮಾಡಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಬಿಜೆಪಿಯಿಂದ ಖಾಸಗಿ ದೂರು ದಾಖಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಈ ವೇಳೇ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರಿಗೂ ಕೂಡ ಜಾಮೀನು ನೀಡಿದೆ. ಬಾಂಡ್ ಗೆ ಸಹಿ ಮಾಡಿದ ಬಳಿಕ ಇಬ್ಬರೂ ಕೂಡ ನ್ಯಾಯಾಲಯದಿಂದ ವಾಪಸ್ಸಾಗಿದ್ದಾರೆ.
Key words: Bail, granted, CM, Siddaramaiah, DCM, DK Shivakumar