ಬೆಂಗಳೂರು,ಸೆಪ್ಟಂಬರ್,15,2022(www.justkannada.in): ಬಳ್ಳಾರಿಯ ವಿಮ್ಸ್ ನಲ್ಲಿ ವಿದ್ಯುತ್ ಸಂಪರ್ಕ ಕಡಿತದಿಂದ ಇಬ್ಬರು ರೋಗಿಗಳ ಸಾವು ಆರೋಪ ಕೇಳಿ ಬಂದಿದ್ದು ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.
ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ಘಟನೆ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಈ ಕುರಿತು ಸ್ಪಷ್ಟನೆ ನೀಡಿದ ಸಚಿವ ಶ್ರೀರಾಮುಲು, ವಿದ್ಯುತ್ ಸಮಸ್ಯೆಯಿಂದ ಸಾವನ್ನಪ್ಪಿಲ್ಲ ಅನಾರೋಗ್ಯದಿಂದ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.
ಸಚಿವರ ಉತ್ತರಕ್ಕೆ ಆಕ್ರೋಶಗೊಂಡ ವಿಪಕ್ಷ ನಾಯಕ ಸಿದ್ಧರಾಮಯ್ಯ, ಇಬ್ಬರು ರೋಗಿಗಳ ಸಾವಿಗೆ ನೇರವಾಗಿ ಡಿಸಿ ಜಿಲ್ಲಾ ಉಸ್ತುವಾರಿ ಸಚಿವರು ಕಾರಣ. ಹೊಣೆ ಹೊತ್ತು ಆರೋಗ್ಯ ಸಚಿವರು,ವೈದ್ಯಕೀಯ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಜವಾಬ್ದಾರಿ ವಹಿಸಬೇಕು ಮೃತರ ಕುಟುಂಬಗಳಿಗೆ ಸರ್ಕರ 25 ಲಕ್ಷರೂ ಪರಿಹಾರ ನೀಡಬೇಕು. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡಬಾರದು ಎಂದ ಸಿದ್ಧರಾಮಯ್ಯ ಕಿಡಿಕಾರಿದರು.
Key words: ballari-Hospital-responsible -death – two patients-former cm-Siddaramaiah