ಬೆಂಗಳೂರು,ಜೂನ್,24,2024 (www.justkannada.in): ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆರೋಗ್ಯತದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
Key words: Ban, use, artificial colors, kababs, fish- chicken