ಮೈಸೂರು, ಮೇ 27, 2022 (www.justkannada.in): ಕರ್ನಾಟಕ ವಿಧಾನಸಭೆ ಸಚಿವಾಲಯದ ನೌಕರರ ಸಂಘ ಕರೆ ನೀಡಿದ್ದ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯದ ನೌಕರರ ಸಂಘದಿಂದ ಬಂದ್ ಗೆ ಕರೆನೀಡಲಾಗಿತ್ತು. ಆದರೆ ಸಚಿವಾಲಯದ ಶೇ.40ರಷ್ಟು ನೌಕರರು ಕರ್ತವ್ಯಕ್ಕೆ ಎಂದಿನಂತೆ ಹಾಜರಾಗಿದ್ದಾರೆ.
60ರಷ್ಟು ನೌಕರರು ಕರ್ತವ್ಯಕ್ಕೆ ಗೈರುಹಾಜರಾಗಿದ್ದರು. ಹೀಗಾಗಿ ಸಚಿವಾಲಯದಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿತ್ತು.
ಕರ್ತವ್ಯಕ್ಕೆ ಹಾಜರಾಗುವ ನೌಕಕರಿಗೆ ಅಡ್ಡಿಪಡಿಸಿದರೆ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸುವುದಾಗಿ ಹಾಗೂ ಶಿಸ್ತು ಕ್ರಮವ ಕೈಗೊಳ್ಳುವ ಎಚ್ಚರಿಕೆಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ನೀಡಿದ್ದರು. ಹೀಗಾಗಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.