ನಾಳೆ ಯಾವುದೇ ರೀತಿ ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ- ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು,ಮಾರ್ಚ್,21,2025 (www.justkannada.in):  ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ನಾಳೆ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಬಲವಂತವಾಗಿ ಬಂದ್ ಮಾಡಿಸಬಾರದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್,  ಕೆಲ ಕನ್ನಡಪರ ಸಂಘಟನೆಗಳು ಬಂದ್ ಬಗ್ಗೆ ಘೋಷಣೆ ಮಾಡಿವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಭದ್ರತೆ ಕ್ರಮವಹಿಸಲಾಗುತ್ತದೆ.  ನಾಳಿನ ಬಂದ್  ಭದ್ರತೆ ಬಗ್ಗೆ ನಾವು ಸಿದ್ದತೆ  ಮಾಡಿಕೊಂಡಿದ್ದೇವೆ.

ಯಾವುದೇ ರೀತಿ ಬಲವಂತವಾಗಿ ಬಂದ್ ಮಾಡಿಸುವಂತಿಲ. ಬಂದ್ ಗೆ ಅಗತ್ಯ ಭಧ್ರತೆ ನೀಡಲಾಗುವುದು ಕೋರ್ಟ್ ಆದೇಶದ ಬಗ್ಗೆ ಸಂಘಟನೆ ಮುಖಂಡರಿಗೆ ತಿಳಿಸಿದ್ದೇವೆ ಎಂದು ಬಿ.ದಯಾನಂದ್ ತಿಳಿಸಿದರು.

Key words: no forced, bandh, tomorrow, Bengaluru, Police Commissioner, B. Dayanand