ಗಾಂಜಾ ಸಾಗಿಸುತ್ತಿದ್ದ ಆರೋಪಿ ಅಂದರ್..

ಬೆಂಗಳೂರು,ಸೆಪ್ಟಂಬರ್,6,2020(www.justkannada.in):  ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನ ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.jk-logo-justkannada-logo

ಬಿಲಾಲ್ ಹುಸೇನ್(28) ಬಂಧಿತ ಆರೋಪಿ. ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಬಳಿ ಆರೋಪಿ ಬಿಲಾಲ್ ಹುಸೇನ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಬಂಧಿತನಿಂದ 1.50 ಕೆಜಿ  ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಕೇಳಿ ಬಂದ ಬೆನ್ನಲ್ಲೆ ಬೆಂಗಳೂರಿನಲ್ಲಿ ಅಲರ್ಟ್ ಆಗಿರುವ ಪೊಲೀಸರು ಬೆಂಗಳೂರಿನ ಸುತ್ತಮುತ್ತ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.bangalore-accused-ransporting-marijuana-arrest

ಈ ನಡುವೆ ಅತ್ತಿಬೆಲೆ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಯ ಬಳಿ ಗಾಂಜಾ ಇರುವುದು ಪತ್ತೆಯಾಗಿದೆ.

Key words: Bangalore-accused -ransporting –marijuana-arrest