ಬೆಂಗಳೂರು,ಜೂ,6,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆ, ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ರಾಜ್ಯ ಬಿಜೆಪಿ ಸಂಸದರು, ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ. ಕೊರೋನಾ ಭೀತಿ ಮುಂದಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ಹೀಗಾಗಿ ಯಾರೂ ಬಿಜೆಪಿ ಕಚೇರಿ ಪ್ರವೇಶಿಸುವಂತಿಲ್ಲ.
ಇಂದು ಪ್ರವೇಶಕ್ಕೆ ನಿರ್ಬಂಧ ಹೇರಿದ ಬಗ್ಗೆ ಬಿಜೆಪಿ ಘೋಷಣೆ ಮಾಡಿದೆ. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ಇದೆ.
Key words: Bangalore- BJP office- entry – Restriction