ಬೆಂಗಳೂರು, ನ.21, 2021 : ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದಿಷ್ಟು…
ಎ.ಸಿ. ಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
‘ಸಾರ್ವಜನಿಕರಿಂದಲೂ ಬಿಡಿಎ ಅಕ್ರಮಗಳ ಬಗ್ಗೆ ದೂರುಗಳು ಬಂದಿದ್ದವು. ಎಸ್.ಆರ್.ವಿಶ್ವನಾಥ ಅವರೂ ಸಹ ಈ ಬಗ್ಗೆ ನನ್ನ ಗಮನ ಸೆಳೆದಿದ್ದರು. ಸಂಬಂಧಪಟ್ಟ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿತ್ತು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿರಲಿ, ಅಧಿಕಾರಿಗಳಿರಲಿ , ಅವರ ಮೇಲೆ ಕ್ರಮ ಜರುಗಿಸುತ್ತೇವೆ ಎಂದರು.
ಬಿಡಿಎ ಸ್ವಚ್ಛಗೊಳಿಸಬೇಕು. ಸಾಮಾನ್ಯ ಜನರಿಗೆ ಅಗತ್ಯವಿರುವ ಸೇವೆಗಳನ್ನು ದೊರಕಿಸುವ ದೃಷ್ಟಿಯಿಂದ ಬಿಡಿಎ ಸ್ವಚ್ಛಗೊಳಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
key words : Bangalore-development-authority-BDA-cm-action-against-corrupt-officers