ಬೆಂಗಳೂರು,ನವೆಂಬರ್,11,2020(www.justkannada.in): ಬೆಂಗಳೂರಿನ ಹೊಸಗುಡದಹಳ್ಳಿ ಬಳಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 22 ಗಂಟೆಗಳು ಕಳೆದರೂ ಬೆಂಕಿ ತಹಬದಿಗೆ ಬಾರದ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ನಿನ್ನೆ ಮಧ್ಯಾಹ್ನದ ವೇಳೆಗೆ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡ ಸಂಭವಿಸುತ್ತಿದ್ದಂತೆಯೇ ಅಗ್ನಿಶಾಮಕದ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಈ ನಡುವೆ 24 ಗಂಟೆ ಕಳೆದರೂ ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ.
ಅಗ್ನಿ ಅವಘಡದಿಂದಾಗಿ ಅಕ್ಕ-ಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸುವ ಆತಂಕ ಸ್ಥಳೀಯರಿಗೆ ಉಂಟಾಗಿದೆ. ಇನ್ನು ಅವಘಡದಲ್ಲಿ 7 ವಾಹನಗಳು, 2 ವಿದ್ಯುತ್ ಕಂಬಗಳು ಸುಟ್ಟು ಭಸ್ಮವಾಗಿವೆ. ಈ ಬೆಂಕಿ ಅವಘಡದಲ್ಲಿ 2 ರಿಂದ 3 ಕೋಟಿ ನಷ್ಟ ಉಂಟಾಗಿದೆ ಎಂದು ಹೇಳಲಾಗುತ್ತಿದೆ.
ಮಾಲೀಕರ ವಿರುದ್ಧ ಎಫ್ ಐಆರ್…
ಅಗ್ನಿ ಅವಘಡ ಸಂಬಂಧ ಅಯಾಜ್ ಪಾಷಾ ಎಂಬುವವರು ದೂರು ನೀಡಿದ್ದು, ಕೆಮಿಕಲ್ ಫ್ಯಾಕ್ಟರಿಯ ಮಾಲೀಕರಾದ ಕವಿತಾ, ಸಜ್ಜನ್ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.
Key words: Bangalore-Fire case – Chemical Factory-Continued – FIR -against – two.