ಬೆಂಗಳೂರು:ಜೂ-28:(www.justkannada.in) ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರ ಮೇಲೆ ಗುಂಡುಹಾರಿಸಿ ಇಬ್ಬರನ್ನೂ ಅರ್ಕಾವತಿ ಲೇ ಔಟ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆದರೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ರೌಡಿಶೀಟರ್ಗಳಾದ ವಾಸೀಂ ಹಾಗೂ ಫಯಾಜ್ ಬಂಧಿತರು. ಕೆ.ಜಿ ಹಳ್ಳಿ ರೈಲ್ವೆ ಹಳಿ ಬಳಿ ಶಾಹಿದ್ ಎಂಬುವವರನ್ನು ಕೊಲೆ ಮಾಡಿ ಈ ಇಬ್ಬರೂ ಪರಾರಿಯಾಗುತ್ತಿದ್ದರು. ಈ ವೇಳೆ ಆರೋಪಿಗಳ ಮೆಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.
ದುಡ್ಡಿನ ವಿಚಾರವಾಗಿ ಶಾಹಿದ್ನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಖಚಿತ ಮಾಹಿತಿ ಆಧಿರಿಸಿ ಆರೋಪಿಗಳನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಪೊಲೀಸರು ಆತ್ಮ ರಕ್ಷಣೆಗಾಗಿ ಎರಡು ಸುತ್ತು ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಪೇದೆ ಸಿದ್ದಲಿಂಗಯ್ಯ ಎಂಬುವವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪಿಸಿಕೊಂಡಿರುವ ಉಳಿದ ಮೂವರು ಆರೋಪಿಗಳಿಗಾಗಿ ಬಲೆ ಬಿಸಲಾಗಿದೆ.