ತುಮಕೂರು,ಆ,12,2020(www.justkannada.in): ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಕಾವಲ್’ಭೈರಸಂದ್ರದಲ್ಲಿ ಉಂಟಾಗಿರುವ ಗಲಭೆ ಅತ್ಯಂತ ದುರದೃಷ್ಟಕರ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮನವಿ ಮಾಡಿದರು.
ಸಿದ್ಧಗಂಗಾ ಮಠದ ಜೈವಿಕ ವನ ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ಧರ್ಮ ಅಥವಾ ಧರ್ಮ ಗುರುವಿನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವುದು ಸರಿಯಲ್ಲ. ಜಾಲತಾಣಗಳಲ್ಲಿ ಏನಾದರೂ ಬರೆಯುವ ಮುನ್ನ ಸಾಕಷ್ಟು ಸಂಯಮ ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇಡೀ ಘಟನೆಯ ತನಿಖೆ ಮಾಡುತ್ತಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಜನರು ತಾಳ್ಮೆ, ಸಹನೆಯಿಂದ ವರ್ತಿಸಬೇಕು. ಸೌಹಾರ್ದತೆಯನ್ನು ಕಾಪಾಡಬೇಕು. ದೊಂಭಿ, ಗಲಭೆಯಲ್ಲಿ ತೊಡಗುವುದು ಸರಿಯಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.
Key words: Bangalore- riot case-DCM -Ashwath Narayan -appeals – peace.