ಮೈಸೂರು,ಆ,13,2020(www.justkannada.in): ಬೆಂಗಳೂರಿನ ಕೆ.ಜಿ.ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ದ ಮಾಜಿ ಸಚಿವ ಹಾಗೂ ಶಾಸಕ ಎಸ್.ಎ ರಾಮದಾಸ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರಿಂದ ತರ್ಡ್ ಕ್ಲಾಸ್ ರಾಜಕೀಯ. ಇಂತಹ ಸಂದರ್ಭದಲ್ಲಿ ತಮ್ಮದೇ ದಲಿತ ಶಾಸಕನ ಪರವಾಗಿ ನಿಲ್ಲದೆ ಓಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಎಸ್.ಎ ರಾಮದಾಸ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ನಗರದ ಬೆಮಲ್ ಆರ್ಚ್ ನಿಂದ ಮಾನಂದವಾಡಿ ಮುಖ್ಯರಸ್ತೆಗೆ ಸಂಪರ್ಕ ಹೊಂದುವ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು. 2.5ಕೋಟಿ ಅಂದಾಜು ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಾಮದಾಸ್ ಚಾಲನೆ ನೀಡಿದರು. ಶಾಸಕರಿಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಗೀತಾಶ್ರೀ ಯೋಗಾನಂದ್ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.
ಬೆಂಗಳೂರಿನ ಕೆ.ಜಿ.ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಶಾಸಕ ಎಸ್.ಎ ರಾಮದಾಸ್, ಇಂತಹ ಸಂದರ್ಭದಲ್ಲಿ ತಮ್ಮದೇ ದಲಿತ ಶಾಸಕನ ಪರವಾಗಿ ನಿಲ್ಲದೆ ಕಾಂಗ್ರೆಸ್ ನಾಯಕರು ಓಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕನ ಬೆಂಬಲಿಗನನ್ನು ಬಿಜೆಪಿ ಕಾರ್ಯಕರ್ತ ಅಂತ ಹೇಳಿ ಓಲೈಕೆಗೆ ನಿಂತಿದ್ದಾರೆ. ತಮ್ಮದೇ ಶಾಸಕರ ಮನೆ ಮೇಲೆ ದಾಳಿ ಮಾಡಿದ್ರೂ ಕಾಂಗ್ರೆಸ್ ರಕ್ಷಣೆಗೆ ಮುಂದಾಗುತ್ತಿಲ್ಲ ಎಂದು ಹರಿಹಾಯ್ದರು.
ತಪ್ಪು ಯಾರೇ ಮಾಡಿದ್ರು ಅವರಿಗೆ ಕಾನೂನು ರೀತಿಯ ಶಿಕ್ಷೆ ಆಗಬೇಕು. ಶಾಂತಿಯುತವಾಗಿರುವ ರಾಜ್ಯದಲ್ಲಿ ಅನಾವಶ್ಯಕವಾಗಿ ಗಲಭೆ ಮಾಡಲಾಗುತ್ತಿದೆ. ಈ ರೀತಿಯ ಘಟನೆಗಳನ್ನು ಎಲ್ಲಾ ಪಕ್ಷಗಳೂ ಖಂಡಿಸಬೇಕು. ಗಲಭೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.
Key words: Bangalore- riot case- Third Class –Politics-mysore- MLA SA Ramdas