ಬೆಂಗಳೂರು,ಡಿಸೆಂಬರ್,8,2020(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಭಾರತ ಬಂದ್ ಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಮಧ್ಯೆ ನಾಳೆಯೂ ರೈತರ ಪ್ರತಿಭಟನೆ ಮುಂದುವರೆಯಲಿದೆ.
ನಾಳೆ ರೈತರಿಂದ ಬಾರುಕೋಲು ಚಳುವಳಿ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ರೈತಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನಾಳೆಯಿಂದ ನಮ್ಮ ಹೋರಾಟ ತೀವ್ರಸ್ವರೂಪ ಪಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ. ಈ ಮುತ್ತಿಗೆ ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಈ ಮೂಲಕ ರೈತ ವಿರೋಧಿ ಮಸೂದೆಗಳ ವಿರುದ್ಧ ತೀವ್ರವಾಗಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಹಾಗೆಯೇ ನಾಳೆ ಬೆಂಗಳೂರಿನಲ್ಲಿ ರೈತರು ಬಾರುಕೋಲು ಚಳುವಳಿ ಆಯೋಜನೆ ಮಾಡಲಾಗಿದ್ದು ಸುಮಾರು 10 ಸಾವಿರ ರೈತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
Key words: barukolu Movement -Farmers – Tomorrow-bangalore-Decision -Vidhan soudha