ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್

ಬೆಂಗಳೂರು,ಫೆಬ್ರವರಿ,10,2025 (www.justkannada.in): ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಗೆ ಮತ್ತೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಶಾಸಕ ಯತ್ನಾಳ್ ಟೀಮ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಕ್ ನೀಡಿದೆ. ಬಿಜೆಪಿ ಹೈಕಮಾಂಡ್  ಸೂಚನೆಯಿಂದ ಬಿಜೆಪಿ ಶಿಸ್ತು ಸಮಿತಿಯು ಶಾಸಕ ಯತ್ನಾಳ್‌ ಗೆ ನೋಟಿಸ್ ನೀಡಿದೆ.

ಈ ಹಿಂದೆ ನೋಟಿಸ್ ನೀಡಿದ್ರೂ ಮತ್ತೆ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆ ಮತ್ತೊಂದು ಶೋಕಸ್ ನೋಟಿಸ್ ನೀಡಲಾಗಿದೆ . ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶೋಕಾಸ್ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

Key words: BJP Central Disciplinary Committee, notice, MLA, Basanagouda Patil Yatnal