ಶಿವಮೊಗ್ಗ, ಫೆ.27,2020(www.justkannada.in): ದೊರೆಸ್ವಾಮಿ ನಕಲಿ ಸ್ವಾತಂತ್ರ ಹೋರಾಟಗಾರ, ಪಾಕ್ ಏಜೇಂಟ್ ರಂತೆ ಮಾತನಾಡುತ್ತಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಗಾರರು. ಅವರು ಪಕ್ಷಾತೀತರಾಗಿರಬೇಕಿತ್ತು. ಆದರೆ ಅವರು ಒಂದು ಪಕ್ಷದ ಪರವಾಗಿ ಮಾತನಾಡಿದರೆ ಅವರ ಬಗ್ಗೆ ಗೌರವ ಹೇಗೆ ಉಳಿಯುತ್ತದೆ. ಸ್ವಾತಂತ್ರ್ಯ ಹೋರಾಟಗಾರರು ಪಕ್ಷಾತೀತವಾಗಿರಬೇಕು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳೀದ್ದಾರೆ
ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಹಿಂದಿನಿಂದನೂ ದೊರೆಸ್ವಾಮಿ ಅವರು ಬೆಂಬಲ ನೀಡಿಕೊಂಡು ಬಂದಿದ್ದಾರೆ. ಆದರೆ ಸ್ವಾತಂತ್ರ್ಯ ಹೋರಾಟಗಾರರಾಗಿರುವ ದೊರೆಸ್ವಾಮಿ ಪಕ್ಷಾತೀತವಾಗಿರಬೇಕಿತ್ತು. ಆದರೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬೆಂಬಲ ಕೊಟ್ಟಿದ್ದು ಸರಿಯಲ್ಲ ಎಂದರು.
ಇದೇ ವೇಳೆ ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ದರಾಮಯ್ಯ ವಿಧಾನಸೌಧದ ಅಧಿವೇಶನ ನಡೆಯಲು ಬಿಡುವುದಿಲ್ಲ ಎನ್ನುತ್ತಿದ್ದಾರೆ. ಅದು ಹೇಗೆ ಅಧಿವೇಶನ ನಡೆಯಲು ಬಿಡುವುದಿಲ್ಲವೋ ನಾನು ನೋಡುತ್ತೇನೆ. ವಿಧಾನಸೌಧ ಅವರ ಸ್ವಂತ ಆಸ್ತಿಯಲ್ಲ. ಕಾಂಗ್ರೆಸ್ಸಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿಧಾನಸೌಧವಿಲ್ಲ ಎಂದು ಟಾಂಗ್ ನೀಡಿದರು.
Key words: Basanagowda Patil Yatnal- statement – Doreswamy-Minister -KS Eshwarappa- Shimoga