ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಸಭಾಪತಿ ಬಸವರಾಜ ಹೊರಟ್ಟಿ

ಹುಬ್ಬಳ್ಳಿ,ಮಾರ್ಚ್, 25,2025 (www.justkannada.in): ಇತ್ತೀಚಿನ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಅಸಮಾಧಾನ ಹೊರಹಾಕಿದ್ದ ಸಭಾಪತಿ ಬಸವರಾಜ ಹೊರಟ್ಟಿ,  ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ  ಇಂದು ಮಾತನಾಡಿರುವ ಬಸವರಾಜ ಹೊರಟ್ಟಿ, ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ. 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ರಾಜೀನಾಮೆ ನಿರ್ಧಾರವನ್ನ  ಅಲ್ಲಿಗೆ ಕೈ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನನ್ನ ಜೊತೆಗೆ ಗವರ್ನರ್, ಸಚಿವರು, ಶಾಸಕರು ಇದ್ದಾರೆ. ಮಾರ್ಚ್.27ರಂದು ಕುಳಿತು ಚರ್ಚಿಸೋಣ. ಅಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ. ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ  ಎಂದು ತಿಳಿಸಿದರು.

ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವಂತ ರಾಜೀನಾಮೆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ರಾಜೀನಾಮೆ ಪತ್ರದಲ್ಲಿ ಸಹಿ ಇರಲಿಲ್ಲ. ವೈರಲ್ ಪತ್ರಕ್ಕೆ ನಾನು ಸಹಿ ಮಾಡಿಲ್ಲ. ಹದಗೆಟ್ಟ ವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸುವೆ. ಎಲ್ಲರೂ ನೀವು ರಾಜೀನಾಮೆ ಕೊಡಬೇಡಿ ಎಂದಿದ್ದಾರೆ ಎಂದರು.

Key words: Basavaraj Horatti, backs down, resignation, decision