ಬೆಳಗಾವಿ,ಡಿಸೆಂಬರ್,21,2022(www.justkannada.in): ವಿಧಾನ ಪರಿಷತ್ತಿನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವರ ಹಿರಿತನವನ್ನು ಪರಿಗಣಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಅವರ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸದ ಕಾರಣ ಸುಮಾರು ಮೂರು ದಶಕಗಳ ನಂತರ ಬಸವರಾಜ ಹೊರಟ್ಟಿ ಮೇಲ್ಮನೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಇಂದು ಬಸವರಾಜ ಹೊರಟ್ಟಿ ಸಭಾಪತಿ ಹುದ್ದೆ ಅಲಂಕರಿಸಿದ್ದು, ಹೊರಟ್ಟಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿ ಪ್ರಸಾದ್ ಅಭಿನಂಧನೆ ಸಲ್ಲಿಸಿದರು.
ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಈ ವೇಳೆ ಬಿಜೆಪಿ ಅವರಿಗೆ ಸಭಾಪತಿ ಸ್ಥಾನ ಕೊಡುವ ಭರವಸೆ ನೀಡಿತ್ತು. 43 ವರ್ಷಗಳಿಂದ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಎಲ್ ಸಿಯಾಗಿ ಆಯ್ಕೆಯಾಗಿರುವ ಹೊರಟ್ಟಿ ಅವರು ಸಭಾಪತಿ ಹುದ್ದೆಗೆ ನಿನ್ನೆ ನಾಮಪತ್ರ ಸಲ್ಲಿಸಿದ್ದರು.
Key words: Basavaraja horatti- elected -chairman –lagislative council