ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಪಬ್​ ಗೆ BBMP ನೋಟಿಸ್.

ಬೆಂಗಳೂರು, ಡಿಸೆಂಬರ್​ 21,2024 (www.justkannada.in)  ಭಾರತ ಸ್ಟಾರ್​​ ಕ್ರಿಕೆಟರ್ ಮಾಜಿ ಕ್ಯಾಪ್ಟನ್ ​ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್​ ಬಾರ್ ಆಯಂಡ್​ ರೆಸ್ಟೋರೆಂಟ್​ಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ನೀಡಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇರುವ ಒನ್ 8 ಕಮ್ಯೂನ್​ ಬಾರ್ ಆಯಂಡ್​ ರೆಸ್ಟೋರೆಂಟ್  ​ನಲ್ಲಿ ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಬಿಬಿಎಂಪಿ ನೋಟಿಸ್​ ನೀಡಿದೆ.

ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವರು ಈ ಬಗ್ಗೆ ಪಾಲಿಕೆಗೆ ದೂರು ನೀಡಿದ್ದರು. ದೂರು ಆಧರಿಸಿ ಶಾಂತಿನಗರ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಒಂದು ಬಾರಿ ನೋಟಿಸ್​ ನೀಡಿದ್ದರೂ ವಿರಾಟ್ ಕೊಹ್ಲಿ ಮಾಲೀಕತ್ವದ ಬಾರ್​  ಆ್ಯಂಡ್​ ರೆಸ್ಟೋರೆಂಟ್​ ಉತ್ತರಿಸದೇ ನಿರ್ಲಕ್ಷ್ಯ ವಹಿಸಿತ್ತು. ಇದೀಗ ಏಳು ದಿನದೊಳಗೆ ಸಮಜಾಯಿಸಿ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

Key words: BBMP, notice, pub, co-owned, cricketer, Virat Kohli.