ಬೆಂಗಳೂರು, ಆಗಸ್ಟ್ 13, 2023 (www.justkannada.in): ಪ್ರಾಥಮಿಕ ಶಾಲೆಯ ಶಿಕ್ಷಕರಾಗುವವರು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಬಿಎಡ್ ಅರ್ಹತೆ ನಿಗದಿ ಮಾಡಿ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಶಿಕ್ಷಕರಿಗೆ ಸಂಬಂಧಿಸಿದ ಬೋಧನಾ ಕೌಶಲ ಅತ್ಯಂತ ಮಹತ್ವದಾಗಿದೆ. ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಡಿಎಡ್ ಅರ್ಹತೆಯೇ ಹೊರತೂ ಬಿಎಡ್ ಅಲ್ಲ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ್ ಬೊಸ್ ಮತ್ತು ಸುಧಾಂಶು ಧುಲಿಯಾ ಅವರ ನ್ಯಾಯಪೀಠ ತಿಳಿಸಿದೆ.
ಈ ಮೂಲಕ ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಅರ್ಹತೆಯಾಗಿ ಬಿಎಡ್ ನಿಗದಿ ಮಾಡಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.