ಬಾಣಂತಿಯರ ಸಾವು ಸರ್ಕಾರದ ಪ್ರಾಯೋಜಿತ ಕೊಲೆ- ಸಿಟಿ ರವಿ ಆಕ್ರೋಶ

ಬೆಳಗಾವಿ,ಡಿಸೆಂಬರ್,9,2024 (www.justkannada.in): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಕುರಿತು ಸರ್ಕಾರದ ವಿರುದ್ದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ಮಾತನಾಡಿದ ಸಿ.ಟಿ ರವಿ, ಅಧಿವೇಶನದಲ್ಲಿ ಸರ್ಕಾರದ ವಿರುದ್ದ ಹೋರಾಟಕ್ಕೆ ಬಿಜೆಪಿ ಸಿದ್ದತೆ  ಮಾಡಿಕೊಂಡಿದೆ. ಬಾಣಂತಿಯರ ಹಸುಗೂಸಿನ ಸಾವಿನ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. ಬಾಣಂತಿಯರ ಸಾವು ಸರ್ಕಾರದ ಪ್ರಾಯೋಜಿತ ಕೊಲೆ ಎಂಧು ಕಿಡಿಕಾರಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ  ವಕ್ಫ್ ಕಾನೂನು ಸಂವಿಧಾನಕ್ಕೆ ವಿರುದ್ದವಾಗಿದೆ. ಆದರೆ ರಾಜ್ಯ ಸರ್ಕಾರ ರೈತರಿಗೆ ಸ್ಪಂದಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Key words: Belgaum ,winter session, Congress government,  CT Ravi