ಬೆಳಗಾವಿ, ಡಿಸೆಂಬರ್,9,2024 (www.justkannada.in): ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದ್ದು ವಿವಿಧ ವಿಚಾರಗಳನ್ನ ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ದ ಮುಗಿಬೀಳಲು ಬಿಜೆಪಿ ಜೆಡಿಎಸ್ ಸಜ್ಜಾಗಿದೆ.
ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು, ವಕ್ಫ್ ವಿವಾದ, ಮುಡಾ ಅಕ್ರಮ, ವಾಲ್ಮೀಕಿ ನಿಗಮ ಹಗರಣ ಸೇರಿ ಹಲವು ವಿಚಾರಗಳ ಮೇಲೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಿದ್ದವಾಗಿದೆ.
ಬಿಜೆಪಿಯ ಅಸ್ತ್ರಗಳಿಗೆ ಕಾಂಗ್ರೆಸ್ ಕೊರೊನಾ ಹಗರಣದ ಪ್ರತ್ಯಸ್ತ್ರ ಸಿದ್ಧ ಮಾಡಿಟ್ಟುಕೊಂಡಿದೆ. ಅಷ್ಟೇ ಅಲ್ಲ, ವಕ್ಫ್ ವಿಚಾರ ಮುಂದಿಟ್ಟರೆ, ಯತ್ನಾಳ್ ಪ್ರತ್ಯೇಕ ಹೋರಾಟ ಪ್ರಸ್ತಾಪಿಸಿ ತಿವಿಯುವ ಸಾಧ್ಯತೆ ಇದೆ.
ಇಂದು ಮೊದಲ ದಿನ ಅಧಿವೇಶನದಲ್ಲಿ ವಕ್ಫ್ ವಿವಾದ ಕುರಿತು ಬಿಜೆಪಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ವಕ್ಫ್ ಬಗ್ಗೆ ಚರ್ಚಿಸಲು ಬಿಜೆಪಿ ನೋಟಿಸ್ ನೀಡಿದ್ದು, ಸುದೀರ್ಘ ಚರ್ಚೆಗೆ ಮನವಿ ಮಾಡಿದೆ. ಒಟ್ಟಾರೆ ಸಾಲು ಸಾಲು ವಿಚಾರಗಳನ್ನ ಮುಂದಿಟ್ಟುಕೊಂಡು ಸದನದಲ್ಲಿ ಸರ್ಕಾರದ ವಿರುದ್ದ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.
Key words: Belgaum ,winter session, begins, today