ಬೆಂಗಳೂರು, ಅಕ್ಟೋಬರ್ 17, 2020 (www.justkannada.in): ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಇನ್ನೂ ಎರಡು ದಿನ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಮುಂದಿನ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ನಡುವೆ ಉಂಟಾಗಿರುವ ವಾಯುಭಾರ ಕುಸಿತದ ನಡುವೆ ಟ್ರಪ್ ನಿರ್ಮಾಣವಾಗಿರುವುದರಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.