ಬೆಂಗಳೂರು ಮಾ1: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.
ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು.
ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.
ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದರು.
ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದರು.
ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಹಾರೈಸಿದರು.
KEY WORDS: Chief Minister, Siddaramaiah,16th Bengaluru International Film Festival
ENGLISH SUMMARY:
Chief Minister Siddaramaiah Inaugurates the 16th Bengaluru International Film Festival* International Film Festival reflects the culture of the Global Community: CM Siddaramaiah.
Karnataka to Build a World-Class Film City in Mysuru: CM Announces*
Bengaluru, March 1: Chief Minister Siddaramaiah announced that the Government of Karnataka will establish a world-class film city in Mysuru with 150 acres of land already allotted for the project.
Speaking at the inauguration of the 16th Bengaluru International Film Festival (BIFFES) at the grand steps of Vidhana Soudha, the Chief Minister emphasized that international film festivals are a reflection of global culture and should be leveraged to create meaningful and impactful cinema.
“Karnataka is a land of immense opportunities. To further strengthen our film industry, we are developing a state-of-the-art film city in Mysuru. I hope this facility will encourage the production of world-class films that seamlessly blend human values with advanced technology,” he said.
Highlighting the growing disparities in wealth, CM Siddaramaiah pointed out that you 50% of the nation’s wealth is concentrated in the hands of just 1% of the population, leading to widespread social unrest and dissatisfaction. He urged the film industry to take an active role in addressing societal issues, fostering unity, and promoting progressive ideals through cinema.
Recalling the legacy of Dr. Rajkumar, he noted that the legendary actor’s films were rooted in human values and social harmony, making them widely cherished across generations. He lamented that such values are often missing in contemporary cinema.
He further cautioned against the promotion of superstitions and unconstitutional values in films, citing Basavanna’s philosophy, which rejected the doctrine of karma. “Cinema should be a tool for enlightenment, not regression,” he asserted.
With technology evolving rapidly, including advancements in artificial intelligence, the Chief Minister encouraged filmmakers to create content that reflects real-life issues and offers solutions. “Such films will stand the test of time and leave a lasting impact on society,” he added.
“Karnataka and Bengaluru is a global hub, offering every opportunity for filmmakers. If we harness technology effectively, the cinema industry can flourish while also contributing positively to society. The CM aspired that the film industry moves towards greater humaneness and inclusivity in storytelling.