ಬೆಂಗಳೂರು,ಅಕ್ಟೋಬರ್,7,2023(www.justkannada.in): ಬೆಂಗಳೂರು ಜನರಿಗೆ ಯಾವುದೇ ಹೊಸ ಟ್ಯಾಕ್ಸ್ ಹಾಕುವುದಿಲ್ಲ. ಇರುವ ಟ್ಯಾಕ್ಸ್ ಸರಿಯಾಗಿ ಕಟ್ಟಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರು ಜನರಿಗೆ ಯಾವುದೇ ಹೊಸ ಟ್ರಾಫಿಕ್ ಟ್ಯಾಕ್ಸ್ ಹಾಕುವುದಿಲ್ಲ. ಇರುವ ಟ್ಯಾಕ್ಸ್ ಸರಿಯಾಗಿ ಕಟ್ಟಬೇಕು . ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಒತ್ತುವರಿ ತೆರವು ಮಾಡುವುದನ್ನು ಅಧಿಕಾರಿಗಳಿಗೆ ಬಿಟ್ಟಿದ್ದೇವೆ ಎಂದರು.
ಹಳ್ಳಿಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಹಳ್ಳಿಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಎಲ್ಲವನ್ನೂ ನೋಡಬೇಕು, ಸ್ಟ್ರೀಮ್ ಲೈನ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
Key words: Bengaluru – not impose – new tax – people – DCM- DK Shivakumar.