ಡೆಂಗ್ಯೂ ಬಗ್ಗೆ ಎಚ್ಚರದಿಂದಿರಿ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕರೆ.

Beware of Dengue: Health Minister Dinesh Gundu Rao calls

 

ಮೈಸೂರು, ಜೂ.22,2024: (www.justkannada.in news) ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಆದರೆ ಡೆಂಗ್ಯೂ ಪೀಡಿತರ ಪ್ರಮಾಣ ಕಡಿಮೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮೈಸೂರಿನ ಕಲಾ ಮಂದಿರದಲ್ಲಿ ಇಂದು, ಕರ್ನಾಟಕ ಯೋಗ ಶಿಕ್ಷಕರ ಒಕ್ಕೂಟ ವತಿಯಿಂದ ಆಯೋಜಿಸಿದ್ದ  ರಾಜ್ಯ ಮಟ್ಟದ ಪ್ರಥಮ ಯೋಗ ಸಮ್ಮೇಳನ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ಸಚಿವ ದಿನೇಶ್‌ ಗುಂಡೂರಾವ್‌ ಮಾಧ್ಯಮಗಳ ಜತೆ ಮಾತನಾಡಿದರು.

ಈಗ ಮಳೆಗಾಲ ಆಗಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಆದಾಗ್ಯೂ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಸೊಳ್ಳೆಗಳ ಮೂಲಕ ಡೆಂಗ್ಯೂ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು. ಮೈಸೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ.

ಸೂರಜ್ ರೇವಣ್ಣ ಪ್ರಕರಣ :

ನಾನು ಪತ್ರಿಕೆಯಲ್ಲಿ ಬಂದು ಸುದ್ದಿ ನೋಡಿದ್ದೇನೆ. ಯಾರೋ ಹೋಗಿ ದೂರು ಕೊಟ್ಟಿದ್ದಾರಂತೆ. ಪತ್ರಿಕೆ ಸುದ್ದಿ ನೋಡಿ ಪ್ರತಿಕ್ರಿಯೆ ಕೊಡಲಾಗುತ್ತಾ. ಕಾನೂನು ಇದೆ, ಅದರ ಪ್ರಕಾರ ಶಿಕ್ಷೆ ಆಗುತ್ತೆ. ಮೈಸೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ.

key words: Beware of Dengue, Health Minister, Dinesh Gundu Rao, calls