ಬೆಂಗಳೂರು,ಮಾರ್ಚ್,24,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಈ ಮಧ್ಯೆ ಭಾರತ್ ಬಂದ್ ನಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ.
ಮಾರ್ಚ್ 26 ರಂದು ಕರೆ ನೀಡಲಾಗಿರುವ ಭಾರತ್ ಬಂದ್ ವೇಳೆ ತಟಸ್ಥವಾಗಿರಲು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಅವರು,ಯಾವುದೇ ತಯಾರಿ ಇಲ್ಲದೆ ಬಂದ್ ಸಾಧ್ಯವಿಲ್ಲ. ಈಗ ಬಂದ್ ಮಾಡಿದ್ರೆ ಯಶಸ್ವಿಯಾಗುವುದಿಲ್ಲ. ಬಂದ್ ಮಾಡಿಕೊಳ್ಳುವವರು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಬೆಲೆ ಏರಿಕೆ, ಕೃಷಿ ಕಾಯ್ದೆ ಮತ್ತು ಖಾಸಗೀಕರಣವನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾದಿಂದ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.
Key words: Bharat Bandh – March 26 –farmer leader- Kodihalli Chandrashekhar’-decision