ನವದೆಹಲಿ,ಫೆಬ್ರವರಿ,9,2024(www.juskannada.in): ಮಾಜಿ ಪ್ರಧಾನಿಗಳಾದ ಪಿ.ವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಹಾಗೂ ಭಾರತ ದೇಶದ ಹಸಿರು ಕ್ರಾಂತಿಯ ಹರಿಕಾರರೆಂದು ಪ್ರಸಿದ್ಧರಾಗಿರುವ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇತ್ತೀಚಿಗೆ ಮಾಜಿ ಉಪಪ್ರಧಾನಿ ಬಿಜೆಪಿಯ ಭೀಷ್ಮ ಎಲ್ಕೆ ಅಡ್ವಾಣಿ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ಗ ಭಾರತ ರತ್ನ ಘೋಷಿಸಲಾಗಿತ್ತು. ಇದೀಗ ಮೂವರು ಗಣ್ಯರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ.
1991ರಿಂದ 1996ರ ವರೆಗೆ ಭಾರತದ ಪ್ರಧಾನಿಯಾಗಿದ್ದ ಪಿವಿ ನರಸಿಂಹರಾವ್, ಭಾರತದ ಆರ್ಥಿಕತೆ ಉದಾರೀಕರಣದ ರುವಾರಿ ಎಂದೇ ಗುರುತಿಸಿಕೊಂಡಿದ್ದಾರೆ. ಇತ್ತ 179ರಲ್ಲಿ ಅಲ್ಪ ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಚೌಧರಿ ಚರಣ್ ಸಿಂಗ್ ದೇಶದ ರೈತರ ಹಕ್ಕುಗಳ ಹೋರಾಟದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ನಾಯಕರಾಗಿದ್ದಾರೆ . ಇನ್ನು ಭಾರತದಲ್ಲಿ ಹಸಿರು ಕ್ರಾಂತಿ ಮಾಡಿದ ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರ ಸಾಧನೆಯನ್ನು ಗುರುತಿಸಿ ಭಾರತದ ಅತ್ಯನ್ನತ ಭಾರತ ರತ್ನ ಪ್ರಶಸ್ತಿ ಘೋಷಿಸಲಾಗಿದೆ.
Key words: Bharat Ratna-former PM- PV Narasimha Rao- Chaudhary Charan Singh- MS Swaminathan.