ಬೆಂಗಳೂರು, ಅಕ್ಟೋಬರ್,18,2024 (www.justkannada.in): ಕೆ.ಆರ್ ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದು ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಬೆನ್ನಲ್ಲೇ ಎಸ್ ಐ ಟಿ ಅಧಿಕಾರಿಗಳು ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದೀಗ ಭವಾನಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದು ಮಾಡಲು ನಿರಾಕರಿಸುವ ಮೂಲಕ ಹೈಕೋರ್ಟ್ ಆದೇಶ ಎತ್ತಿ ಹಿಡಿದಿದೆ.
ರಾಜಕೀಯ ಕುಟುಂಬ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
Key words: Bhavani Revanna, Supreme Court, rejects, cancellation, bail