ಬೆಂಗಳೂರು,ಏಪ್ರಿಲ್,11,2025 (www.justkannada.in): ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಭೀಮ ಹೆಜ್ಜೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಇಂದು ವಿಧಾನಸೌಧದಲ್ಲಿ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭೀಮ ಹೆಜ್ಜೆ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಗೋವಿಂದ ಕಾರಜೋಳ, ಎನ್ ಮಹೇಶ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಭೀಮ ಹೆಜ್ಜೆ 100ರ ಸಂಭ್ರಮ’ ಜಾಗೃತಿ ಕಾರ್ಯಕ್ರಮ ಅಂಗವಾಗಿ ಬೆಂಗಳೂರಿನಿಂದ ನಿಪ್ಪಾಣಿ ವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 15ರಂದು ನಿಪ್ಪಾಣಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
Key words: BJP , Bhima Hejje, campaign