ನವದೆಹಲಿ,ಆಗಸ್ಟ್,4,2023(www.justkannada.in): ಮೋದಿ ಹೆಸರಿನ ಬಗ್ಗೆ ಅವಹೇಳನ ಕೇಸ್, ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ ವಿಧಿಸಿದ್ದ 2 ವರ್ಷದ ಜೈಲುಶಿಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ , ಮೋದಿ ಹೆಸರಿನ ಉಪನಾಮ ಹೊಂದಿದವವರು ಕಳ್ಳರು ಎಂಬ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಹೇಳಿಕೆ ಕುರಿತು ಸೂರತ್ ನಲ್ಲಿ ಕೋರ್ಟ್ ನಲ್ಲಿ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸೂರತ್ ಕೋರ್ಟ್ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನ ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿತ್ತು.
ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ , ಎರಡು ವರ್ಷದ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
Key words: Big relief – Rahul Gandhi- Supreme Court -stays – 2year- jail sentence.