ಬೆಂಗಳೂರು, ಆಗಸ್ಟ್ 1, 2021 (www.justkannada.in): ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
8 ರಾಜ್ಯಗಳಲ್ಲಿ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಇದು ಆರಂಭವಾಗಲಿದೆ. ಆದರೆ ಆ ಭಾಷೆಗಳ ಸಾಲಿನಲ್ಲಿ ಕನ್ನಡವನ್ನು ಕೈಬಿಡಲಾಗಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ಈ ವಿಷಯ ತಿಳಿಸಿದ್ದಾರೆ.
ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಬಂಗಾಳಿ ಎಂಬ 5 ಭಾರತೀಯ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.