ಇಸ್ಲಾಮಾಬಾದ್,ಏಪ್ರಿಲ್,26,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆಸಿದ್ದಕ್ಕೆ ಇದರ ಪ್ರತಿಯಾಗಿ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕೈಗೊಳ್ಳಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ನಿರ್ಧಾರದಿಂದ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನದ ಮಾಜಿ ಸಚಿವ ಹಾಗೂ ಪಾಕ್ ಪೀಪಲ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ನಾಲಿಗೆ ಹರಿಬಿಟ್ಟಿದ್ದಾರೆ.
ಸಿಂಧೂ ನದಿ ನಮ್ಮದು. ಸಿಂಧೂ ನದಿ ನೀರು ಬಿಡದಿದ್ದರೇ ರಕ್ತ ಹರಿಯುತ್ತದೆ. ಸಿಂಧೂ ನದಿ ಒಪ್ಪಂದ ರದ್ದುಗೊಂಡರೆ ರಕ್ತಪಾತವಾಗುತ್ತದೆ ಎಂದು ಬಿಲಾವಲ್ ಭುಟ್ಟೋ ಹೇಳಿದ್ದಾರೆಂದು ವರದಿಯಾಗಿದೆ.
ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಿಲಾವಲ್ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಯಾವುದೇ ಕಾರಣಕ್ಕೂ ಪಾಕ್ ಗೆ ಅನ್ಯಾಯ ಆಗಲು ಬಿಡಲ್ಲ. ನದಿಯಲ್ಲಿ ನೀರು ಹರಿಯುತ್ತೆ. ಇಲ್ಲವೇ ರಕ್ತ ಹರಿಯುತ್ತೆ. ಜನರನ್ನ ಮೂರ್ಖರನ್ನಾಗಿಸಲು ಪಾಕ್ ಮೇಲೆ ಆರೋಪ ಮಾಡುತ್ತಿದ್ದಾರೆ. ಭಾರತ ಅಪಾಯವನ್ನ ಮೈ ಮೇಲೆ ಎಳೆದುಕೊಂಡಿದೆ ಎಂದಿದ್ದಾರೆ.
ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ.
Key words: Sindhu River ,Agreement,Former Pakistan Minister, Bilawal Bhutto