ಮಂಗಳೂರು,ಜುಲೈ,27,2022(www.justkannada.in): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಪೊಲೀಸರನ್ನ ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಇಂದು ಸಿಎಂ ಜೊತೆಗೆ ಎಲ್ಲಾ ರೀತಿಯ ಚರ್ಚೆ ನಡೆಸಲಾಗಿದೆ. ಪರಿಸ್ಥಿತಿಯ ಬಗ್ಗೆ ಡಿಜಿ ಪ್ರವೀಣ್ ಸೂದ್ ಎಲ್ಲಾ ಮಾಹಿತಿಯನ್ನು ನೀಡಿದ್ದಾರೆ. ಪೊಲೀಸರು ಕೇರಳಾಗೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ 10 ಮಂದಿ ವಶಕ್ಕೆ ಪಡೆಯಲಾಗಿದೆ. ಕೇರಳ ಸರ್ಕಾರದ ಜೊತೆ ನಮ್ಮ ಡಿಜಿ ಮಾತನಾಡಿದ್ದಾರೆ. ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದರು.
ಹತ್ಯೆ ಪ್ರಕರಣವನ್ನ ಎನ್ ಐಎಗೆ ಕೊಡಲು ತಯಾರಿದ್ದೇವೆ. ಶಾಂತಿ-ಸುವ್ಯವಸ್ಥೆ ಕಾಪಾಡಲಾಗುತ್ತದೆ. ಅಪರಾಧಿಗಳನ್ನು ಬಂಧಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
Key words: BJP –activist- Praveen Nettaru- murder- case- 10 – police -custody.