ಮಂಗಳೂರು,ಸೆಪ್ಟಂಬರ್,14,2023(www.justkannada.in): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ಚೈತ್ರಾ ಕುಂದಾಪುರರಿಂದ ವಂಚನೆ ಪ್ರಕರಣ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಟಿಕೆಟ್ ಕೊಡಿಸುತ್ತೇವೆ ಎಂದು ಹಣ ಪಡೆದಿರುವ ವಿಚಾರವನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
Key words: BJP – Chaitra Kundapur- case- Former CM -Basavaraja Bommai.