ಬೆಳಗಾವಿ,ಮಾರ್ಚ್,8,2023(www.justkannada.in): ಕಾಂಗ್ರೆಸ್ ನಾಯಕ ಇತ್ತೀಚೆಗೆ ದೇಶಾದ್ಯಂತ ಭಾರತ್ ಜೋಡೋ ಪಾದಯಾತ್ರೆ ಮಾಡಿದ್ದು ಯಶಸ್ವಿಯಾಗಿತ್ತು. ಈ ಯಾತ್ರೆ ಕುರಿತು ಮಾತನಾಡಿ ಕಾಂಗ್ರೆಸ್ ಟೀಕಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಟಾಂಗ್ ಕೊಟ್ಟರು.
ಬೆಳಗಾವಿ ರಾಯಭಾಗದಲ್ಲಿ ಬಿಜೆಪಿ ಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ತ್ರಿಪುರಾ ನಾಗಲ್ಯಾಂಡ್ ಸೇರಿ ಮೂರು ಕಡೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೋದಿ ಎಲ್ಲಾ ಧರ್ಮದವರನ್ನ ಸಮಾನವಾಗಿ ನೋಡಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರನ್ನೂ ಸಮಾನವಾಗಿ ನೋಡಿದ್ದಾರೆ. ಒಂದು ದಿನವೂ ಅವರು ವಿಶ್ರಾಂತಿ ಪಡೆದಿಲ್ಲ ಎಂದು ತಿಳಿಸಿದರು.
ಟಿಕೆಟ್ ನೀಡುವ ವಿಚಾರವನ್ನ ಹೈಕಮಾಂಡ್ ತಿರ್ಮಾನಿಸುತ್ತದೆ. ಹೈಕಮಾಂಡ್ ಹಾಗೂ ಚುನಾವಣಾ ಸಮಿತಿಯಲ್ಲಿ ಚರ್ಚೆಯಾದ ಬಳಿಕ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ನಿರ್ಧಾರವಾಗುತ್ತದೆ. ಇಲ್ಲಿನ ವಾಸ್ತವಿಕ ಸ್ಥಿತಿಯನ್ನ ತಿಳಿದುಕೊಂದು ಹೈಕಮಾಂಡ್ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದು ಬಿಎಸ್ ವೈ ತಿಳಿಸಿದರು.
ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತೇವೆ ಎಂದ ಕನಸು ಕಾಣುತ್ತಿದ್ದಾರೆ, ಅವರ ಕನಸು ನನಸಾಗಲ್ಲ. ಡಿ.ಕೆ. ಶಿವಕುಮಾರ್ ನಿರಂತರವಾಗಿ ಹೀಗೆ ಹೇಳುತ್ತಾರೆ, ಕಾಂಗ್ರೆಸ್ ನವರಿಗೆ ಸೋಲಿನ ಭಯ ಶುರುವಾಗಿದೆ ಎಂದು ಬಿಎಸ್ ವೈ ಕುಟುಕಿದರು.
Key words: BJP – come – power -three states- after -Rahul Gandhi-padayatre-BS Yeddyurappa