ಬೆಂಗಳೂರು, ಫೆಬ್ರವರಿ 05, 2023 (www.justkannada.in): ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೆಸರಿದ್ದು, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ, ಕಾಂಗ್ರೆಸ್ ಆಗ್ರಹಿಸಿವೆ.
ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ದೋಷಾರೋಪ ಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೆಸರಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಬಿಜೆಪಿ, ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ದೆಹಲಿಯ ಎಎಪಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ಕೇಜ್ರಿವಾಲ್ ಅವರಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹಾಗೂ ಸಚಿವ ಸತ್ಯೇಂದ್ರ ಜೈನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಒತ್ತಾಯಿಸಿದ್ದಾರೆ.