ಬೆಂಗಳೂರು, ಸೆಪ್ಟೆಂಬರ್ 6,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಅಪರೇಷನ್ ಹಸ್ತದ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಮಧ್ಯೆ ಇಬ್ಬರು ಬಿಜೆಪಿ ಮುಖಂಡರು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ನಿನ್ನೆ ರಾತ್ರಿ ಡಿಸಿಎಂ ಡಿ.ಕೆ ಶಿವಕುಮಾರ್ ರನ್ನ ಭೇಟಿಯಾಗಿದ್ದಾರೆ.
ಬೆಂಗಳೂರಿನ ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಉಭಯ ನಾಯಕರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ‘ಆಪರೇಷನ್ ಹಸ್ತ’ದ ವದಂತಿ ಹೆಚ್ಚುತ್ತಿರುವ ಸಂದರ್ಭದಲ್ಲೇ ಉಭಯ ನಾಯಕರು ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
Key words: DCM- DK Shivakumar -met –discussed- two- BJP leaders.