ಬೆಂಗಳೂರು,ಸೆಪ್ಟಂಬರ್,13,2021(www.justkannada.in): ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ. ಬೆಲೆ ಏರಿಕೆಗೆ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ನಾಯಕರು ಎತ್ತಿನಗಾಡಿ ಏರಿ ಎತ್ತಿನಗಾಡಿ ಚಲೋ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದರು.
ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಏರಿಕೆ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದೆ ಎಂದು ಸುಳ್ಳು ಹೇಳುತ್ತಿದೆ. ಅಂತರಾಷ್ಟ್ರೀಯ ಮಟ್ಟದ ತೈಲಬೆಲೆ ಹೆಚ್ಚಾಗಿಲ್ಲ ಎಂದು ಕಿಡಿಕಾರಿದರು.
ಹಿಂದಿನ ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುತ್ತಾರೆ. ಆದರೆ 7 ವರ್ಷದಲ್ಲಿ 24 ಲಕ್ಷ ಕೋಟಿ ಸರ್ಕಾರಕ್ಕೆ ಆದಾಯ ಬಂದಿದೆ. ಬೆಲೆ ಏರಿಕೆ ವಿರುದ್ದ ಸದನದ ಒಳಗೆ ಹೊರಗೆ ಎರಡು ಕಡೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಸಿದ್ಧರಾಮಯ್ಯ ಹೇಳಿದರು.
Key words: BJP- government- directly- responsible – price hike-Opposition leader- Siddaramaiah
ENGLISH SUMMARY…
Former Chief Minister and Leader of the Opposition in the Assembly Siddramaiah today alleged that the Union Government is cheating the people by increasing the prices of all essential commodities.
As the Assembly session commenced today, the Congress leaders expressed their ire on the State and Union Governments’ opposing the price hike by taking out a ‘bullock cart’ jatha in Bengaluru today.
Speaking to the media persons Siddaramaiah said, “the Union Government is cheating the people by increasing the prices of petrol, diesel, and other essential commodities. If we question the Union Government they will lie that the prices of fuel in the International market have increased, whereas the fuel prices at the international level have not increased.”
“They claim that the earlier government in the center has left behind the huge loan. But the Union Government has collected about Rs.24 lakh crores in the form of taxes in the last 7 years. We will continue our fight against the increase in prices of essential commodities inside the assembly,” he said.