ಮೈಸೂರು, ಅಕ್ಟೋಬರ್, 22,2024 (www.justkannada.in): ವಿರೋಧ ಪಕ್ಷಗಳ ಮೇಲೆ ಬಿಜೆಪಿಯು ಸುಳ್ಳು ಕೇಸ್ ಹಾಕಿ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ. ಇದೇ ರೀತಿ ಮುಂದುವರೆದರೆ ಸರ್ವಾಧಿಕಾರಿ ದೋರಣೆ ಹೆಜ್ಜಾಗುತ್ತದೆ ಎಂದು ಎಂಎಲ್ ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ವರುಣಾ ಕ್ಷೇತ್ರದ ಜನ ಸಂತಸ ಪಡುವ ದಿನ. ಗ್ಯಾರಂಟಿ ಕೊಟ್ಟಿದ್ದರಿಂದ ಅಭಿವೃದ್ಧಿಗೆ ಹಿನ್ನಡೆ ಆಯಿತು ಅಂತಾ ಹೇಳುತ್ತಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ಕೊಟ್ಟಿದ್ದಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆಗಿದ್ದಾರೆ. ಹೀಗಾಗಿ ಕ್ಷೇತ್ರಕ್ಕೆ ಭರಪೂರ ಕೊಡಗೆ ಕೊಟ್ಟಿದ್ದಾರೆ ಎಂದು ನುಡಿದರು.
ಗ್ಯಾರಂಟಿ ಸ್ಕೀಮ್ ನಿಂದ ಅಭಿವೃದ್ಧಿ ಆಗುತ್ತಿಲ್ಲ ಅಂತಾ ವಿರೋಧ ಪಕ್ಷದವರು ಹೇಳುತ್ತಿದ್ದರು. ಆದರೆ ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ ಆಗಿಲ್ಲ, ವರುಣಾ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಗ್ಯಾರಂಟಿಯಿಂದ ಆರ್ಥಿಕ ಪ್ರಗತಿ ಕಡಿಮೆ ಆಗುತ್ತೆ ಅಂತಾ ಎಲ್ಲಾ ಭಾವಿಸಿದ್ದರು. ಆದರೆ ರಾಷ್ಟ್ರೀಯ ಸರಾಸರಿಗಿಂತ ರಾಜ್ಯದ ಆರ್ಥಿಕ ಪ್ರಗತಿ 10.2 ಹೆಚ್ಚಾಗಿದೆ. ಇದು ಗ್ಯಾರಂಟಿಯಿಂದ ಯಾವುದೇ ಆರ್ಥಿಕ ಹೊಡೆತ ಬಿದ್ದಿಲ್ಲ ಅನ್ನೋದು ಗೊತ್ತಾಗಲಿದೆ ಎಂದರು.
ಬಿಜೆಪಿ ಪಕ್ಷ ವಿರೋಧ ಪಕ್ಷಗಳ ಮೇಲೆ ಸುಳ್ಳು ಕೇಸ್ ಹಾಕಿ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಸರ್ಕಾರ ಅಸ್ಥಿರ ಮಾಡುವ ಕೆಲಸ ಮಾಡುತ್ತಿದೆ. ಇದೇ ರೀತಿ ಮುಂದುವರೆದರೆ ಸರ್ವಾಧಿಕಾರಿ ಧೋರಣೆ ಹೆಚ್ಚಾಗುತ್ತೆ. ವ್ಯವಸ್ಥೆ ದುರುಪಯೋಗ ಮಾಡಿಕೊಂಡು ಸರ್ಕಾರಗಳನ್ನ ಅಸ್ಥಿರ ಮಾಡಿದರೆ ಪ್ರಜಾಪ್ರಭುತ್ವ ಉಳಿಯೋಲ್ಲ ಎಂದು ಕಿಡಿಕಾರಿದರು.
Key words: BJP, government, false case, Yatindra Siddaramaiah