ಹುಬ್ಬಳ್ಳಿ,ಮೇ,15,2023(www.justkannada.in): ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತದೆ. ಅಂತ ನಾನು ಈ ಹಿಂದೆ ಹೇಳಿದ್ದೆ. ಅದು ಈಗ ಆಗಿದೆ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಬಿಎಸ್ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು, ಹಿರಿಯ ನಾಯಕರನ್ನ ಕಡೆಗಣಿಸಿದ್ದು ಬಿಜೆಪಿಯ ಈ ಸ್ಥಿತಿಗೆ ಕಾರಣ. ಅಧಿಕಾರ ಬಂದ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ. ನಾನು ಅವತ್ತು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ಬಿ.ಎಸ್ ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಬಿ.ಎಸ್ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಎಂದಿದ್ದರು. ಯಾವದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಸ್ಥಿತಿಗೆ ಕಾರಣ ಹೇಳಿದರು.
ಬಿ.ಎಸ್ ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ ಕಡೆಗಣಿಸಿದ್ದೇ ಇದಕ್ಕೆಲ್ಲ ಕಾರಣ. ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಬೇಕು ಅಂದ್ರೆ ಏನು..? ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಾಗ ಹೇಗೆ ನಡೆಕೊಂಡರು ಅಂತ ರಾಜ್ಯಕ್ಕೆ ಗೊತ್ತಿದೆ ಎಂದು ಬಿಜೆಪಿಗೆ ಟಾಂಗ್ ನೀಡಿದರು.
Key words: BJP -government – washed – BSY- tears -Sri Dingaleshwara Swamiji