ಬೆಂಗಳೂರು,ಮಾರ್ಚ್,12,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ಸಂಬಳ ಭತ್ಯೆ ನೀಡುತ್ತಿದ್ದಾರೆಂದು ಆರೋಪಿಸಿ ಹಾಗೆಯೇ ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದುಗೊಳಿಸುವಂತೆ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು ನೀಡಿತು.
ಇಂದು ರಾಜಭವನದಲ್ಲಿ ಗವರ್ನರ್ ವಜುಭಾಯಿ ವಾಲ ಅವರನ್ನು ವಿಪಕ್ಷ ನಾಯಕ ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಭೇಟಿಯಾಗಿ ದೂರು ನೀಡಿದರು.
ಈ ದೂರು ನೀಡಿದ ನಂತರ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ. ಈ ಸರಕಾರಕ್ಕೆ ತಿಳಿಹೇಳುವ ಕೆಲಸ ಮಾಡುವಂತೆ ಹಾಗೂ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
Key words: BJP-JDS, complain, Governor, Guarantee Implementation Committee