ಬೆಂಗಳೂರು,ಜೂನ್,7,2023(www.justkannada.in): ಗ್ಯಾರಂಟಿಗಳ ಬಗ್ಗೆ ತಾವು ಮಾತನಾಡಿದ್ಧ ವಿಡಿಯೋ ವೈರಲ್ ಆದ ಬೆನ್ನಲ್ಲೆ ಈ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಗಿಮಿಕ್ ಅಂತಾ ಹೇಳಿಲ್ಲ. ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ನಾವು ಈಡೇರಿಸುತ್ತಿದ್ದೇವೆ. ಬಿಜೆಪಿಯವರಿಗೆ ಜಾಲತಾಣದಲ್ಲಿ ವೈರಲ್ ಮಾಡುವುದೇ ಕೆಲಸ ಆಗಿದೆ. ಬಿಜೆಪಿಗೆ ವೈರಲ್ ಮಾಡೋದು ಬಿಟ್ಟು ಬೇರೆ ಕೆಲಸ ಮಾಡಲು ಹೇಳಿ ಎಂದು ಟಾಂಗ್ ನೀಡಿದರು.
ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದ್ದು ಆ ವಿಡಿಯೋದಲ್ಲಿ , ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್ ಗಳನ್ನು ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ.
Key words: BJP – job – viral – internet – Minister -Chaluvarayaswamy.