ವಿಧಾನಸೌಧ ಮುತ್ತಿಗೆಗೆ ಬಿಜೆಪಿ ನಾಯಕರಿಂದ ಯತ್ನ:  ಬಿವೈ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ವಶಕ್ಕೆ

ಬೆಂಗಳೂರು,ಜುಲೈ,18,2024 (www.justkannada.in):  ವಾಲ್ಮೀಕ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣವನ್ನ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ವಾಲ್ಮೀಕ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣವನ್ನ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಯಿತು. ಈ ನಡುವೆ ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ ಬಿವೈ ವಿಜಯೇಂದ್ರ ಸೇರಿ ಹಲವು ನಾಯಕರು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ಈ ಮಧ್ಯೆ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ದು, ಹಗರಣ ಸರ್ದಾರ್ ಕಾಂಗ್ರೆಸ್ ಎಂದು ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ,  ಸಿಎಂ ಸಿದ್ದರಾಮಯ್ಯಗೆ ಭಯ ಶುರುವಾಗಿದೆ. ಇದರಿಂದಾಗಿ ಇಡಿ ಮೇಲೆ ಆರೋಪ ಮಾಡುತ್ತಿದ್ದಾರೆ ನಿಗಮದ ಭ್ರಷ್ಟಾಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ.  ಕಾಂಗ್ರೆಸ್ ಗೆ ನೈತಿಕತೆ ಇದೆಯಾ..? ಎಂದು ಪ್ರಶ್ನಿಸಿದರು.

ಎಸ್ ಸಿ, ಎಸ್ ಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಆದರೂ ಕಾಂಗ್ರೆಸ್ ನಿರಪರಾಧಿಗಳೆಂದು ಹೇಳಿಕೆ ಕೊಡ್ತಾ ಇದೆ.  ಅಧಿಕಾರಿಗಳ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಸಿಎಂ ರಾಜೀನಾಮೆ ನೀಡಬೇಕು ಎಂದು ಬಿವೈ ವಿಜಯೇಂದ್ರ ಒತ್ತಾಯಿಸಿದರು.

Key words: BJP leaders, Vidhana Soudha, Protest, arrest